ಪೆರ್ಲ: ಪೆರ್ಲ ನಾಲಂದ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಭಾರತೀಯ ವಾಯು ಸೇನೆಯಲ್ಲಿ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಯೋಧ ನರಸಿಂಹ ಭಟ್ ಬಾಳೆಮೂಲೆ ಧ್ವಜಾರೋಹಣ ನೆರವೇರಿಸಿದರು. ಕಾಲೇಜು ಆಡಳಿತ ಮಂಡಳಿ ಖಜಾಂಜಿ ಶಶಿಭೂಷಣ ಶಾಸ್ತ್ರಿ, ಪ್ರಾಂಶುಪಾಲ ಶಂಕರ ಖಂಡಿಗೆ, ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಸದಸ್ಯರು, ಕಾಲೇಜು ಉಪನ್ಯಾಸಕರು ಸಿಬ್ಬಂದಿ ಭಾಗವಹಿಸಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಸ್ವಾಗತಿಸಿ, ವಿದ್ಯಾರ್ಥಿನಿ ಪ್ರಜ್ಞಾ ವಂದಿಸಿದರು.




.jpg)
