ಕಾಸರಗೋಡು: ವಿಶ್ವ ಹಿಂದೂ ಪರಿಷತ್ (ವಿಹಿಂಪ)ನ ಸ್ಥಾಪನಾ ದಿನಾಚರಣೆ ಆ. 15ರಂದು ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಾಲಯ ಸಭಾಂಗಣದಲ್ಲಿ ಜರುಗಿತು. ಕಾಸರಗೋಡು ಪ್ರಖಂಡ ಸಮಿತಿಯ ಗೌರವಾಧ್ಯಕ್ಷ ಡಾ. ವೆಂಕಟ್ರಮಣ ಹೊಳ್ಳ ಅವರು ಓಂಕಾರ ಧ್ವಜವನ್ನು ಏರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾಸರಗೋಡು ಪ್ರಖಂಡ ಸಮಿತಿಯ
ವಿಹಿಂಪ ಕಾಸರಗೋಡು ಜಿಲ್ಲಾ ಸಮಿತಿ ಕಾರ್ಯದರ್ಶಿ ಗಣೇಶ ಮಾವಿನಕಟ್ಟೆ ಪರಿಷತ್ತಿನ ಕಾರ್ಯಚಟುವಟಿಕೆಗಳ ಮಹತ್ವವನ್ನು ಹಂಚಿಕೊಂಡರು.
ವಿಶ್ವ ಹಿಂದೂ ಪರಿಷತ್‍ನ ಸ್ಥಾಪನಾ ದಿನಾಚರಣೆ ಅದರ ನಿರಂತರ ಕಾರ್ಯಚಟುವಟಿಕೆಗಳ ಅವಿಭಾಜ್ಯ ಭಾಗವಾಗಿದ್ದು, ಹಿಂದೂ ಧರ್ಮದ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವುದು, ಸಮಾಜಮುಖಿ ಸೇವೆಗಳನ್ನು ಹಮ್ಮಿಕೊಳ್ಳುವುದು ಮತ್ತು ಬೃಹತ್ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಸದಾ ಮುಂಚೂಣಿಯಲ್ಲಿದೆ. ಈ ಬಾರಿ ಸಂಸ್ಥೆಯು ತನ್ನ 61ನೇ ವಾರ್ಷಿಕೋತ್ಸವವನ್ನು ಭವ್ಯವಾಗಿ ಆಚರಿಸಲು ನಿರ್ಧರಿಸಿದ್ದು, ಆಗಸ್ಟ್ 15ರಿಂದ ಪ್ರಾರಂಭವಾಗುವ ಒಂದು ತಿಂಗಳ ವರೆಗೆ ವಿಶೇಷ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ವೈಭವೋಪೇತ ಸಮಾರಂಭಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಅಧ್ಯಕ್ಷ ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿದರು. ಕಾಸರಗೋಡು ನಗರ ಸಮಿತಿಯ ಕಾರ್ಯದರ್ಶಿ ಗಣೇಶ್ ನಾಯಕ್ ನೆಲ್ಲಿಕುಂಜೆ ವಂದಿಸಿದರು.





