ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಬಸ್ ಶೆಲ್ಟರ್‌ಗೆ ಢಿಕ್ಕಿ ಹೊಡೆದಿದೆ.
ಕೆಸಿರೋಡ್ ನಿವಾಸಿಗಳಾದ ರಿಕ್ಷಾ ಚಾಲಕ ಹೈದರ್ (47), ಖದೀಜಾ (60), ಹಸ್ನಾ (11), ನಫೀಸಾ (52), ಆಯಿಷಾ ಫಿದಾ (19), ಫರಂಗಿಪೇಟೆ ನಿವಾಸಿ ಅವ್ವಮ್ಮ(72) ಮೃತಪಟ್ಟಿದ್ದು, ಕಾಸರಗೋಡು ನಿವಾಸಿಗಳಾದ ಲಕ್ಷ್ಮಿ(61), ಸುರೇಂದ್ರ (39) ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಶೆಲ್ಟರ್ ಹತ್ತಿರ ನಿಲ್ಲಿಸಿದ್ದ ಆಟೋ ರಿಕ್ಷಾದಲ್ಲಿದ್ದವರೂ ಸಹ ಅಪಘಾತಕ್ಕೆ ಒಳಗಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




