ಪೆರ್ಲ: ಪಡ್ರೆ ಚೇರ್ಕಬೆ ಶ್ರೀ ಶಾಸ್ತಾರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಂಬತ್ತನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆ. 17ರಂದು ಬೆಳಗ್ಗೆ 10ರಿಂದ ಚೇರ್ಕಬೆ ದೇವಸ್ಥಾನ ವಠಾರದಲ್ಲಿ ಜರುಗಲಿದೆ.
ಶ್ರೀಶಾಸ್ತಾರ ಸುಬ್ರಹ್ಮಣ್ಯೇಶ್ವರ ಸೇವಾ ಟ್ರಸ್ಟ್ ಮತ್ತು ಚೇರ್ಕಬೆ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ವತಿಯಿಮದ ಕಾರ್ಯಕ್ರಮ ಜರುಗಲಿರುವುದು. ಈ ಸಂದರ್ಭ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಹಗೂ ಸರ್ವಜನಿಕರಿಗಾಗಿ ವಿವಿಧ ಸ್ಪರ್ಧೆ ನಡೆಯುವುದು. ಐದು ವರ್ಷದೊಳಗಿನ ಪ್ರಾಯದ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆ ನಡೆಯುವುದು.

