ಬದಿಯಡ್ಕ: ಪಾಯಿಚ್ಚಾಲು ಶ್ರೀಸ್ಕಂದ ಯಕ್ಷಗಾನ ಕೇಂದ್ರದ ಪುಟಾಣಿಗಳಿಂದ ಶ್ರೀಎಡನೀರು ಮಠದ ಶ್ರೀಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಪಂಚಮ ಚಾತುರ್ಮಾಸ್ಯದ ಅಂಗವಾಗಿ ಗಿರಿಜಾಕಲ್ಯಾಣ ಯಕ್ಷಗಾನ ಪ್ರದರ್ಶನ ಜರಗಿತು. ಕೇಂದ್ರದ ಹದಿನೈದು ಚಿಕ್ಕಮಕ್ಕಳ ಪ್ರದರ್ಶನ ಜನಮನಗೆದ್ದಿತು. ಹಿಮ್ಮೇಳದಲ್ಲಿ ಭಾಗವತರಾಗಿ ತಲ್ಪನಾಜೆ ವೆಂಕಟ್ರಮಣ ಭಟ್, ಚೆಂಡೆಯಲ್ಲಿ ಪೃಥ್ವಿಚಂದ್ರ ಶರ್ಮ ಪೆರುವಡಿ ಹಾಗೂ ಮದ್ದಳೆಯಲ್ಲಿ ಲವಕುಮಾರ್ ಐಲ, ಚಕ್ರತಾಳದಲ್ಲಿ ಅರ್ಪಿತ್ ಶೆಟ್ಟಿ, ವಸ್ತ್ರಾಲಂಕಾರದಲ್ಲಿ ರಾಕೇಶ್ ಗೋಳಿಯಡ್ಕ ಸಹಕರಿಸಿದರು. ನಾಟ್ಯಗುರು ರಂಜಿತ್ ಗೋಳಿಯಡ್ಕ ನೇತೃತ್ವ ವಹಿಸಿದ್ದರು. ಅರ್ಜುನ್ ಕೂಡ್ಲು, ಆಕಾಶ್ ಕೂಡ್ಲು ಶ್ರೀವತ್ಸ, ಶ್ರೀಸ್ಕಂದ ಯಕ್ಷಗಾನ ಕೇಂದ್ರದ ಅಧ್ಯಕ್ಷ ಕಿರಣ್ ಪ್ರಸಾದ್ ಕೂಡ್ಲು ಕೋಶಾಧಿಕಾರಿ ಮುರಳೀಧರ ಶೆಟ್ಟಿ, ಕಾರ್ಯದರ್ಶಿ ಕಿರಣ್ ಪಾಯಿಚ್ಚಾಲು ಸಹಕರಿಸಿದರು. ಶ್ರೀಸ್ಕಂದ ಯಕ್ಷಗಾನ ಕೇಂದ್ರದ ಮಕ್ಕಳಿಗೆ ಗುರುಗಳು ಫಲ ಮಂತ್ರಾಕ್ಷತೆ ನೀಡಿ ಹರಸಿದರು.

.jpg)
.jpg)
