ಕಾಸರಗೋಡು: ಜಿಲ್ಲೆಯಲ್ಲಿ ಬಿರುಸಿನ ಮಳೆ ಮುಂದುವರಿಯುತ್ತಿದ್ದು, ಕೇಂದ್ರ ಹವಾಮಾನ ಇಲಾಖೆ ಮುಂದಿನ ಐದು ದಿನಗಳವರೆಗೆ ಬಿರುಸಿನ ಮಳೆಯಾಗುವ ಸಾಧ್ಯತೆಯಿರುವುದಾಘಿ ತಿಳಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ ಆಗಸ್ಟ್ 19 ರವರೆಗೆ ಆರೆಂಜ್ ಅಲರ್ಟ್ ಹಾಗೂ 20 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ವಿವಿಧ ಸ್ಥಳಗಳಲ್ಲಿ ಬಿರುಸಿನ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೇಂದ್ರ ಹವಾಮಾನ ಇಲಾಖೆಯ ಪ್ರಕಾರ 24 ಗಂಟೆಗಳಲ್ಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗಲಿದೆ. ಕೇಂದ್ರ ಹವಾಮಾನ ಇಲಾಖೆ ಪ್ರಕಾರ 24 ತಾಸುಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ಮಳೆಯಾಗುವ ಪರಿಸ್ಥಿತಿಯನ್ನು ಬಿರುಸಿನ ಮಳೆ ಎಂದು ವ್ಯಾಖ್ಯಾನಿಸಲಾಗುತ್ತದೆ.
ಬಿರುಸಿನ ಮಳೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಾಗ್ರತೆ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ.




