ಕಾಸರಗೋಡು: ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ ಬೋಳಾರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.
್ಥತರಿದ್ದರು. ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಗೌರವಾಧ್ಯಕ್ಷರು ಡಾಕ್ಟರ್ ರವೀಂದ್ರ ಜೆಪ್ಪು ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ಶಿಕ್ಷಣಾಧಿಕಾರಿ ಸುಷ್ಮಾ ಕಿಣಿ ಉಪಸ್ಥಿತರಿದ್ದರು. ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬಳೆ ಅವರು ಪ್ರಾಸ್ತಾವಿಕ ನುಡಿಯೊಂದಿಗೆ ಆಂಗ್ಲ ಭಾಷೆಯನ್ನು ಕನ್ನಡಕ್ಕೆ ಪರಿವರ್ತಿಸುವ ರಸಪ್ರಶ್ನೆ ನಡೆಸಿ ಕೊಟ್ಟರು.
ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಅವರನ್ನು ಶಾಲು ಹೊದಿಸಿ ಅಭಿನಂದನಾ ಪತ್ರ , ಸ್ಮರಣಿಕೆ, ಪುಸ್ತಕ ನೀಡಿ ಗೌರವಿಸಲಾಯಿತು. ಚುಟುಕು ವಾಚನ , ಚುಟುಕು ಬರಹದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಒದಗಿಸಲಾಯಿತು. ಹಾಗೂ ಕನ್ನಡ ಸಾಹಿತಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಯಿತು. ಕಾರ್ಯಕ್ರಮದ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದನ ಪತ್ರ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ರೇಖಾ ಸುದೇಶ್ ರಾವ್ ಸ್ವಾಗತಿಸಿದರು. ಸುಧಾ ಕಂಬಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.





