ನವದೆಹಲಿ: ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ಧ ಮತಗಳ್ಳತನದ ಗಂಭೀರ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ರಾಹುಲ್, ಚುನಾವಣಾ ಆಯೋಗವು ಹಲವು ರಾಜ್ಯಗಳಲ್ಲಿ ಬಿಜೆಪಿಯೊಂದಿಗೆ ಕೈ ಜೋಡಿಸಿದೆ ಎಂದು ಕಿಡಿಕಾರಿದ್ದಾರೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ಅವರು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರವನ್ನು ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ.




