ಬದಿಯಡ್ಕ: ಸಕಲ ದುರಿತಗಳ ನಿವಾರಣೆಗಾಗಿ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಶ್ರೀ ಶಕ್ತಿ ಪಂಚಾಕ್ಷರೀ ಹೋಮ ಭಾನುವಾರ ಜರಗಿತು. ಸಾವಿರಾರು ಮಂದಿ ಭಗವದ್ಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡು ಕೃತಾರ್ಥರಾದರು.
ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಅಂತಿಮ ಹಂತದಲ್ಲಿದೆ. ಗರ್ಭಗುಡಿಯ ನವೀಕರಣಕ್ಕಾಗಿ ಶ್ರೀದೇವರ ಬಾಲಾಲಯ ಪ್ರತಿಷ್ಠೆಯನ್ನೂ ಭಾನುವಾರ ಮಾಡಲಾಗಿದೆ. ತಂತ್ರಿವರ್ಯ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿತು. ಶಿಲ್ಪಿ ಕೃಷ್ಣಪ್ರಸಾದ ಮುನಿಯಂಗಳ, ವಸಂತ ಪೈ ಬದಿಯಡ್ಕ, ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್ ಚಂಬಲ್ತಿಮಾರು, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಿರಂಜನ ರೈ, ಕೋಶಾಧಿಕಾರಿ ಸೂರ್ಯನಾರಾಯಣ, ವಿವಿಧ ಸಮಿತಿಗಳ ಪದಾಧಿಕಾರಿಗಳು, ಊರಪರವೂರ ಭಗವದ್ಭಕ್ತರು ಪಾಲ್ಗೊಂಡಿದ್ದರು.




.jpg)
