ಕೋಝಿಕ್ಕೋಡ್ : ಮಿದುಳು ಸೋಂಕಿನಿಂದ (ಅಮೀಬಿಕ್ ಎನ್ಸೆಫಲಿಟಿಸ್) ಉತ್ತರ ಕೇರಳದ ಜಿಲ್ಲೆಯೊಂದರ ಒಂಬತ್ತು ವರ್ಷದ ಬಾಲಕಿಯೊಬ್ಬಳು ಎರಡು ದಿನದ ಹಿಂದೆ ಮೃತಪಟ್ಟಿದ್ದಾಳೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಶನಿವಾರ ದೃಢಪಡಿಸಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಆಗಸ್ಟ್ 13ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆರೋಗ್ಯವು ತೀವ್ರವಾಗಿ ಹದಗೆಟ್ಟಿದ್ದರಿಂದ 14ರಂದೇ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿತ್ತು. ಆಕೆ ಅದೇ ದಿನ ಮೃತಪಟ್ಟಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.




