ಕಾಸರಗೋಡು: ಜಿಲ್ಲೆಯ ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಭಕ್ತಿ ಸಂಭ್ರಮದೊಂದಿಗೆ ಶುಕ್ರವಾರ ನಡೆಯಿತು. ಪೆರ್ಲ ಸನಿಹದ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಉಳ್ಳಾಲ್ತೀ ಮಹಿಳಾ ಸಂಘದ ವತಿಯಿಂದ ಹದಿನೇಳನೇ ವರ್ಷದ ಶ್ರೀವರಮಹಾಲಕ್ಷ್ಮೀ ಪೂಜೆ ನೆರವೇರಿತು.
ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಕೋಟೆಕಣಿ ಸಪರಿವಾರ ಶ್ರೀ ಅನ್ನಪೂರ್ಣೇಶ್ವರೀ ಕ್ಷೇತ್ರ, ಮಧೂರು ಶ್ರೀ ಕಾಳಿಕಾಂಬಾ ಮಠ, ವರ್ಕಾಡಿ ಶ್ರೀಕಾವಿ ಸುಬ್ರಹ್ಮಣ್ಯ ದೇವಸ್ಥಾಣ, ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರೀ ದೇವಸ್ಥಾನ, ವರ್ಕಾಡಿ ಕೊಂಡೆವೂರು ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧೆಡೆ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ಪೆರ್ಲ ಸನಿಹದ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀವರಮಹಾಲಕ್ಷ್ಮೀ ಪೂಜೆ ನಡೆಯಿತು.


.jpg)
