ಕೊಚ್ಚಿ: ಪಾಲಿಯಕ್ಕರದಲ್ಲಿ ಮತ್ತೆ ಟೋಲ್ ಸಂಗ್ರಹಕ್ಕೆ ಅವಕಾಶ ನೀಡಬೇಕೆಂಬ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಸೆಪ್ಟೆಂಬರ್ 9 ರವರೆಗೆ ಟೋಲ್ ಸಂಗ್ರಹಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಸರ್ವಿಸ್ ರಸ್ತೆಯನ್ನು ದುರಸ್ತಿ ಮಾಡಲಾಗಿದೆ ಎಂಬ ಎನ್.ಎಚ.ಎ.ಐ.(ನೇಶನಲ್ ಹೈವೇ ಅಥೋರಿಟಿ ಆಫ್ ಇಂಡಿಯಾ)ಮನವಿಯನ್ನು ನ್ಯಾಯಮೂರ್ತಿ ಮುಹಮ್ಮದ್ ಮುಷ್ತಾಕ್ ಅವರನ್ನೊಳಗೊಂಡ ವಿಭಾಗೀಯ ಪೀಠ ತಿರಸ್ಕರಿಸಿ ಟೋಲ್ ಪರಿಚಯಿಸಲು ಅನುಮತಿ ನಿರಾಕರಿಸಿತು.
ಸರ್ವಿಸ್ ರಸ್ತೆಗಳನ್ನು ದುರಸ್ತಿ ಮಾಡಲಾಗಿದೆ ಎಂದು ಹೇಳುವ ಎನ್.ಎಚ.ಎ.ಐ. ಹಲವಾರು ದಾಖಲೆಗಳು ಮತ್ತು ಚಿತ್ರಗಳನ್ನು ಸಲ್ಲಿಸಿತ್ತು. ಆದಾಗ್ಯೂ, ನ್ಯಾಯಾಲಯ ನೇಮಿಸಿದ ಮೂವರು ಸದಸ್ಯರ ಸಮಿತಿಯು ರಸ್ತೆ ನಿರ್ಮಾಣ ನಿಧಾನಗತಿಯಲ್ಲಿ ನಡೆಯುತ್ತಿದೆ, ಸರ್ವಿಸ್ ರಸ್ತೆಗಳನ್ನು ಇನ್ನೂ ಸಂಪೂರ್ಣವಾಗಿ ನವೀಕರಿಸಲಾಗಿಲ್ಲ ಮತ್ತು ವಾಹನಗಳನ್ನು ಬೇರೆಡೆಗೆ ತಿರುಗಿಸುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂದು ಹೈಕೋರ್ಟ್‍ಗೆ ತಿಳಿಸಿದೆ.
ನಂತರ ಪ್ರಕರಣವನ್ನು ಮುಂದಿನ ತಿಂಗಳಿಗೆ ಮುಂದೂಡಲಾಯಿತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಮೂವರು ಸದಸ್ಯರ ಸಮಿತಿಯು ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.

