HEALTH TIPS

Modi In China: 7 ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಚೀನಾ ಪ್ರವಾಸ

ಟಿಯಾಜಿನ್: ಏಳು ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚೀನಾಗೆ ಬಂದಿಳಿದಿದ್ದಾರೆ.

ಭಾರತದ ಮೇಲೆ ಅಮೆರಿಕ ಹೆಚ್ಚುವರಿ ಸುಂಕ ಹೇರಿದ ಬೆ‌ನ್ನಲ್ಲೇ ಮೋದಿ ಚೀನಾ ಪ್ರವಾಸ ಕೈಗೊಂಡಿದ್ದಾರೆ. ಜಪಾನ್‌ನಿಂದ ಅವರು ಚೀನಾಗೆ ಭೇಟಿ ನೀಡಿದ್ದಾರೆ.

ಆರ್ಥಿಕ ಸ್ಥಿರತೆ ಕಾಯ್ದುಕೊಳ್ಳಲು ಭಾರತ-ಚೀನಾ ಒಟ್ಟಾಗಿ ಕೆಲಸ ಮಾಡಬೇಕು: ಮೋದಿ

ಆಗಸ್ಟ್ 31 ಹಾಗೂ ಸೆಪ್ಟೆಂಬರ್ 1 ರಂದು ಶಾಂಘೈ ಸಹಕಾರ ಸಂಘದ ವಾರ್ಷಿಕ ಸಮಾವೇಶದಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರ ಜೊತೆ ಭಾನುವಾರ ಸಭೆ ನಿಗದಿಯಾಗಿದ್ದು, ಅಮೆರಿಕ ಸುಂಕ ಹೇರಿಕೆ ದೃಷ್ಟಿಯಿಂದ ಈ ಮಾತುಕತೆ ಮಹತ್ವದ್ದು ಎನಿಸಿದೆ.

ಭಾರತ- ಚೀನಾ ಆರ್ಥಿಕತೆ, ಪೂರ್ವ ಲಡಾಖ್‌ ವಿವಾದ ಬಳಿಕ ಹಳಸಿರುವ ಸಂಬಂಧ ಸುಧಾರಣೆ ಬಗ್ಗೆ ಮಾತುಕತೆ ನಡೆಯಲಿದೆ.

ಸಮಾವೇಶದ ನಡುವೆಯೇ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸೇರಿದಂತೆ ಹಲವು ನಾಯಕರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries