HEALTH TIPS

ವೈವಾಹಿಕ ಸಂಬಂಧ ನಿರ್ವಹಿಸಬೇಕು | ಷರತ್ತುಬದ್ಧ ಜಾಮೀನು ಆದೇಶ ರದ್ದುಗೊಳಿಸಿದ SC

ನವದೆಹಲಿ: ಪತ್ನಿಯೊಂದಿಗೆ ವೈವಾಹಿಕ ಸಂಬಂಧ ನಿರ್ವಹಿಸಬೇಕು ಹಾಗೂ ಆಕೆಯೊಂದಿಗೆ ಘನತೆಯಿಂದ ನಡೆದುಕೊಳ್ಳಬೇಕು ಎಂಬ ಷರತ್ತಿನೊಂದಿಗೆ ವ್ಯಕ್ತಿಗೆ ನಿರೀಕ್ಷಣಾ ಜಾಮೀನು ನೀಡಿ ಜಾರ್ಖಂಡ್‌ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದೆ.

ದೀಪಂಕರ್‌ ದತ್ತಾ ಮತ್ತು ಆಗಸ್ಟೀನ್‌ ಜಾರ್ಜ್‌ ಮಸೀಹ್ ಅವರನ್ನು ಒಳಗೊಂಡ ನ್ಯಾಯಪೀಠವು, ಈ ರೀತಿಯ ಷರತ್ತಿನೊಂದಿಗೆ ಹೈಕೋರ್ಟ್‌ ಜಾಮೀನು ನೀಡಬಾರದಿತ್ತು ಇದರಿಂದ ಮತ್ತಷ್ಟು ವ್ಯಾಜ್ಯ ಉಂಟಾಗಬಹುದು ಎಂದು ಹೇಳಿತು.

ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಕಳೆದ ಫೆಬ್ರುವರಿ 25ರಂದು ಜಾರ್ಖಂಡ್‌ ಹೈಕೋರ್ಟ್‌ ಈ ರೀತಿ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಈ ಆದೇಶದ ವಿರುದ್ಧ ಅನಿಲ್‌ ಕುಮಾರ್ ಅವರು ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries