HEALTH TIPS

Tariff War: ತೊಂದರೆ ಆಗುವ ಕ್ಷೇತ್ರಕ್ಕೆ ಸಹಾಯ; ರಫ್ತುದಾರರ ಬೆಂಬಲಕ್ಕೆ ಸರ್ಕಾರ

ನವದೆಹಲಿ: ಅಮೆರಿಕವು ಭಾರತದ ಸರಕುಗಳ ಮೇಲೆ ವಿಧಿಸಿರುವ ಭಾರಿ ಪ್ರಮಾಣದ ಸುಂಕದ ಕಾರಣದಿಂದಾಗಿ ತೊಂದರೆಗೆ ಒಳಗಾಗಬಹುದಾದ ಕ್ಷೇತ್ರಗಳಿಗೆ ಬೆಂಬಲವಾಗಿ ನಿಲ್ಲಲು ಸರ್ಕಾರ ವಿವಿಧ ಕ್ರಮಗಳಿಗೆ ಮುಂದಾಗಲಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

'ರಫ್ತುದಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರವು ಗಮನ ಹರಿಸಿದೆ. ಅವರಿಗೆ ಸಹಾಯ ಮಾಡಲು ಸಕಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆ ಆರಂಭಿಸಿದೆ' ಎಂದು ಹೇಳಿದ್ದಾರೆ.

ರಫ್ತು ಉತ್ತೇಜನ ಯೋಜನೆ ಜಾರಿಗೊಳಿಸುವುದು, ರಫ್ತು ಪ್ರಕ್ರಿಯೆಯಲ್ಲಿ ವೈವಿಧ್ಯತೆ ತರುವುದು, ಸಾಲ ಮರುಪಾವತಿ ಅವಧಿ ವಿಸ್ತರಣೆ, ಹೊಸ ಮುಕ್ತ ವ್ಯಾಪಾರ ಒಪ್ಪಂದಗಳ (ಎಫ್‌ಟಿಎ) ಅನುಷ್ಠಾನ ಸೇರಿದಂತೆ ವಿವಿಧ ಕ್ರಮಗಳನ್ನು ಜಾರಿಗೊಳಿಸಲು ತಯಾರಿ ನಡೆದಿದೆ. ಅಮೆರಿಕವು ಶೇ 50ರಷ್ಟು ಸುಂಕ ಹೇರಿರುವುದಿಂದ ಆಗಿರುವ ಪರಿಣಾಮದಿಂದ ರಫ್ತುದಾರರನ್ನು ರಕ್ಷಿಸಲು ಈ ಕ್ರಮಗಳು ನೆರವಾಗಲಿವೆ ಎಂದಿದ್ದಾರೆ.

ರಫ್ತು ಪ್ರಕ್ರಿಯೆಯಲ್ಲಿ ವೈವಿಧ್ಯತೆ ತರುವ ಮತ್ತು ಹೊಸ ಮಾರುಕಟ್ಟೆಗಳ ಅನ್ವೇಷಣೆಯಂತಹ ವಿಷಯಗಳ ಕುರಿತು ಚರ್ಚಿಸಲು ಹಣಕಾಸು ಸಚಿವಾಲಯವು ರಫ್ತುದಾರರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದೆ.

ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಶೇ 25ರಷ್ಟು ಹೆಚ್ಚುವರಿ ಸುಂಕ ವಿಧಿಸುವ ಡೊನಾಲ್ಡ್‌ ಟ್ರಂಪ್‌ ಆಡಳಿತದ ನಿರ್ಧಾರ ಆಗಸ್ಟ್‌ 27ರಂದು ಜಾರಿಗೆ ಬಂದಿದೆ. ಅಮೆರಿಕದ ಮಾರುಕಟ್ಟೆ ಪ್ರವೇಶಿಸುವ ಭಾರತದ ಸರಕುಗಳ ಮೇಲಿನ ಒಟ್ಟು ಸುಂಕ ಈಗ ಶೇಕಡ 50ರಷ್ಟಾಗಿದೆ.

ಸಚಿವರ ಭರವಸೆ: 'ಈ ಸವಾಲಿನ ಸಮಯದಲ್ಲಿ ಸರ್ಕಾರವು ರಫ್ತುದಾರರ ಜತೆ ದೃಢವಾಗಿ ನಿಲ್ಲಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಭರವಸೆ ನೀಡಿದ್ದಾರೆ' ಎಂದು ಭಾರತೀಯ ರಫ್ತು ಸಂಘಟನೆಗಳ ಒಕ್ಕೂಟ (ಎಫ್‌ಐಇಒ) ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries