ಚೆನ್ನೈ: ತಮಿಳು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಹಾಗೂ ಅವರ ಬೌನ್ಸರ್‌ಗಳ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ.
ಕಳೆದ ವಾರ ಮದುರೈನಲ್ಲಿ ನಡೆದ ಪಕ್ಷದ ರಾಜ್ಯ ಸಮಾವೇಶದಲ್ಲಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ದೂರಿನ ಪ್ರಕಾರ, ಆಗಸ್ಟ್ 22ರಂದು ನಡೆದ ಪಕ್ಷದ ದ್ವಿತೀಯ ರಾಜ್ಯ ಸಮಾವೇಶದಲ್ಲಿ ಭಾಗವಹಿಸಿದ್ದ ವ್ಯಕ್ತಿ, ಕಾರ್ಯಕ್ರಮದ ಸ್ಥಳದಲ್ಲಿ ವಿಜಯ್ ಅವರತ್ತ ಹೋಗಲು ಯತ್ನಿಸುವಾಗ ಬೌನ್ಸರ್‌ಗಳಿಂದ ಹಲ್ಲೆಗೆ ಒಳಗಾಗಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಬೌನ್ಸರ್‌ಗಳು ಹಲ್ಲೆ ಮಾಡುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಈ ಹಿನ್ನೆಲೆಯಲ್ಲಿ ಕುನ್ನಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಜಯ್ ಹಾಗೂ ಬೌನ್ಸರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

