HEALTH TIPS

Voter Adhikar Yatra | ದೇಶದಾದ್ಯಂತ ಮತದಾರ ಅಧಿಕಾರ ಯಾತ್ರೆ: ರಾಹುಲ್‌ ಗಾಂಧಿ

ಆರಾ: ಬಿಹಾರದಲ್ಲಿ ಆರಂಭವಾಗಿರುವ 'ಮತದಾರ ಅಧಿಕಾರ ಯಾತ್ರೆ'ಯು ಜನರ ಮತಗಳನ್ನು ಕದಿಯುವ ವಿರುದ್ಧ ದೇಶದಾದ್ಯಂತ ಚಳವಳಿಯಾಗಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಶನಿವಾರ ಇಲ್ಲಿ ಹೇಳಿದರು.

ಭೋಜ್‌ಪುರದ ಆರಾದಲ್ಲಿ ನಡೆದ ಕಾಂಗ್ರೆಸ್‌ನ ಮತದಾರ ಅಧಿಕಾರ ಯಾತ್ರೆಯಲ್ಲಿ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, 'ಬಿಹಾರದಲ್ಲಿ ಒಂದೇ ಒಂದು ಮತವನ್ನು ಕದಿಯಲು ನಾವು ಅವಕಾಶ ನೀಡುವುದಿಲ್ಲ' ಎಂದರು.

ದೇಶದಲ್ಲಿ ನಡೆದಿರುವ 'ಮತ ಕಳ್ಳತನ'ದಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಚುನಾವಣಾ ಆಯೋಗ ಭಾಗಿಯಾಗಿವೆ ಎಂದು ವಾಗ್ದಾಳಿ ನಡೆಸಿದರು.

'ಮತದಾನವು ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಹಕ್ಕು. ಆದರೆ, ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಚುನಾವಣೆಯಲ್ಲಿ ಗೆಲ್ಲಲು ಈ ಮತಗಳನ್ನೇ ಕದಿಯುತ್ತಿದೆ. ಮತದಾರರ ಪಟ್ಟಿಯ ಪರಿಷ್ಕರಣೆಯು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ದಾಳಿ' ಎಂದರು.

'ಬಿಜೆಪಿಯು ಜನರ ಮತದಾನದ ಹಕ್ಕನ್ನು ಕಸಿಯುವ ಮೂಲಕ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದು, ಮಹಾರಾಷ್ಟ್ರ ಸೇರಿದಂತೆ ದೇಶದ ಇತರೆ ಭಾಗಗಳಲ್ಲಿ ಮತಗಳನ್ನು ಕದಿಯುವಲ್ಲಿ ಯಶಸ್ವಿಯಾಗಿದೆ' ಎಂದು ದೂರಿದರು.

ರಾಹುಲ್‌ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕದೇಶದಲ್ಲಿ ಇನ್ಮುಂದೆ ಮತ ಕಳ್ಳತನ ನಡೆಯಲು ಅವಕಾಶ ನೀಡಲ್ಲ. ಜನರು ಈಗಾಗಲೇ ಬಿಜೆಪಿ ನಾಯಕರನ್ನು ಮತ ಕಳ್ಳರು ಎನ್ನುತ್ತಿದ್ದಾರೆ ಬಿಹಾರದಲ್ಲಿ ಕಾಂಗ್ರೆಸ್‌ ನಡೆಸಿರುವ 'ಮತದಾರ ಅಧಿಕಾರ ಯಾತ್ರೆ'ಯಲ್ಲಿ ಕೆಲವು ದಿನದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಂತೆ ಕೀಳು ಅಭಿರುಚಿಯ ಮಾತುಗಳನ್ನಾಡಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ಪಟ್ನಾದಲ್ಲಿ ಮೌನ ಮೆರವಣಿಗೆ ನಡೆಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries