ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ ನಡೆಸಿದ ಪ್ರಕರಣದ ಆರೋಪಿ, ವೆಳ್ಳರಿಕುಂಡು ತಾಲೂಕು ಭೀಮನಡಿ ಕುನ್ನಂಗೈ ನಿವಾಸಿ ನೌಫಲ್ ಕೆ.ಕೆ ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ(ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಹತ್ತು ವರ್ಚಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಮೂರು ತಿಂಗಳ ಹೆಚ್ಚಿನ ಜೈಲುಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.
ಪ್ರಕರಣದ ಎರಡು ಮತ್ತು ಮೂರನೇ ಆರೋಪಿಗಳಾದ ಕುರಂಜೇರಿ ಮರಿಙತ್ ಪರಂಬಿಲ್ ನಿವಾಸಿ ರೋನಿ ವರ್ಗೀಸ್ ಮತ್ತು ಸಮೀರ್ ಅಲಿಯಾಸ್ ಮುಳಗ್‍ಪೊಡಿ ಸಮೀರ್ ಅವರನ್ನು ಖುಲಾಸೆಗೊಳಿಸಲಾಗಿದೆ. 2019 ಫೆ. 3ರಂದು ಚಿತ್ತಾರಿಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪೂಙËಟ್ ಎಂಬಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 112ಕಿ.ಗ್ರಾಂ ಗಾಂಜಾ ವಶಪಡಿಸಿ ಆರೋಪಿಗಳನ್ನು ಬಂಧಿಸಲಾಗಿತ್ತು.




