ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಯ ಮೊದಲ ಹಂತ ಇದಾಗಿದೆ.
'ಬುಲೆಟ್ ರೈಲು ಯೋಜನೆಯ ಕಾಮಗಾರಿಯು ಭರದಿಂದ ಸಾಗುತ್ತಿದೆ. ಠಾಣೆ-ಅಹಮದಾಬಾದ್ ನಡುವೆ 2028ರಲ್ಲಿ ಬುಲೆಟ್ ರೈಲು ಸಂಚಾರ ಆರಂಭಗೊಳ್ಳಲಿದೆ. ಮುಂಬೈ ಮತ್ತು ಅಹಮದಾಬಾದ್ ನಡುವೆ 2029ರಲ್ಲಿ ಬುಲೆಟ್ ರೈಲು ಸಂಚರಿಸಲಿದೆ ಎಂದು ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯು ಪೂರ್ಣಗೊಂಡ ಬಳಿಕ ಮುಂಬೈ ಮತ್ತು ಅಹಮದಾಬಾದ್ ನಡುವಿನ ಪ್ರಯಾಣದ ಅವಧಿ ಕೇವಲ 2 ಗಂಟೆ 7 ನಿಮಿಷ ಇರಲಿದೆ.
ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗೆ 2017ರಲ್ಲಿ ಚಾಲನೆ ನೀಡಲಾಗಿತ್ತು. 2023ರಲ್ಲಿ ಈ ಯೋಜನೆ ಪೂರ್ಣಗೊಳಿಸಲು ಯೋಜಿಸಲಾಗಿತ್ತು, ಆದರೆ ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಕಾಮಗಾರಿ ವಿಳಂಬಗೊಂಡಿದೆ.




