ಕಾಸರಗೋಡು: ವಿದ್ಯಾನಗರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಕಾರ್ಯಾಚರಿಸುತ್ತಿರುವ ಎಂಪ್ಲೋಯೆಬಿಲಿಟಿ ಸೆಂಟರ್‍ನ ನೇತೃತ್ವದಲ್ಲಿ ಮುನ್ನಾಡ್ ಪೀಪಲ್ಸ್ ಕೋ-ಆಪರೇಟೀವ್ ಆಟ್ರ್ಸ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ಮಿನಿ ಉದ್ಯೋಗ ಮೇಳ ಸೆ. 27 ರಂದು ಬೆಳಗ್ಗೆ 9.30ಕ್ಕೆ ಜರುಗಲಿದೆ.
ಒಂದು ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ವಿವಿಧ ಖಾಸಗಿ ಸಂಸ್ಥೆಗಳು ಸಂದರ್ಶನ ನಡೆಸಲಿದ್ದು, ಆಸಕ್ತರು https://linktr.ee/employability ಎಂಬ ಲಿಂಕ್ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ(9207155700)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




