HEALTH TIPS

ಶ್ರೀನಗರ | ಹಜರತ್‌ಬಾಲ್‌ ಮಸೀದಿಯಲ್ಲಿ ಅಶೋಕ ಲಾಂಛನದ ಫಲಕ ಧ್ವಂಸ: 50 ಜನರು ವಶಕ್ಕೆ

ಶ್ರೀನಗರ: ಹಜರತ್‌ಬಾಲ್‌ ಮಸೀದಿಯಲ್ಲಿ ಅಶೋಕ ಲಾಂಛನ ಹೊಂದಿದ್ದ ಫಲಕವನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲ್ಲದೆ ಈ ಕೃತ್ಯ ಎಸಗಿದವರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ.

ಶುಕ್ರವಾರದ ಸಾಮೂಹಿಕ ಪ್ರಾರ್ಥನೆ ಬಳಿಕ ಈ ಘಟನೆ ನಡೆದಿದ್ದು, ಪೊಲೀಸರು ಸಿಸಿಟಿವಿ ದೃಶ್ಯಗಳು ಮತ್ತು ಘಟನೆಯ ವಿಡಿಯೊಗಳನ್ನು ಪರಿಶೀಲಿಸಿ, ಇಷ್ಟು ಜನರನ್ನು ವಶಕ್ಕೆ ಪಡೆದಿದ್ದಾರೆ.

'ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ, ಆದರೆ ಕೆಲವರನ್ನು ಪ್ರಶ್ನಿಸಲು ವಶಕ್ಕೆ ಪಡೆಯಲಾಗಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries