ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಸಂಜೆ 5 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂಬಂಧ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ನವರಾತ್ರಿ ಮುನ್ನಾ ದಿನದಂದು ಪ್ರಧಾನಿ ಮೋದಿ ಭಾಷಣ ಮಾಡಲಿದ್ದು, ದೇಶದ ಜನತೆಗೆ ಶುಭಾಶಯ ಕೋರಲಿದ್ದಾರೆ.
ಜತೆಗೆ ನಾಳೆಯಿಂದ (ಸೆಪ್ಟೆಂಬರ್ 22) ಉತ್ಪನ್ನಗಳ ಮೇಲಿನ ಜಿಎಸ್‌ಟಿ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಮೋದಿ ಮಾತನಾಡಲಿದ್ದಾರೆ ಎನ್ನಲಾಗಿದೆ.
ಹೇರ್ ಆಯಿಲ್ ಸೇರಿದಂತೆ ಕಾರ್ನ್‌ಫ್ಲೇಕ್ಸ್, ಟಿವಿ ಸೆಟ್‌ಗಳಿಂದ ಹಿಡಿದು ಆರೋಗ್ಯ ಮತ್ತು ಜೀವ ವಿಮೆ ಪಾಲಿಸಿ ವರೆಗಿನ ಸಾಮಾನ್ಯ ಜನರು ಬಳಸುವ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಪರಿಷ್ಕರಿಸುವ ಮಹತ್ವದ ನಿರ್ಧಾರವನ್ನು ಜಿಎಸ್‌ಟಿ ಮಂಡಳಿ ಈಚೆಗೆ ತೆಗೆದುಕೊಂಡಿತ್ತು.
ಜಿಎಸ್‌ಟಿ ವ್ಯವಸ್ಥೆಯ ಅಡಿಯಲ್ಲಿ ಈಗ ಇರುವ ನಾಲ್ಕು ತೆರಿಗೆ ಹಂತಗಳನ್ನು ಎರಡು ಹಂತಗಳಿಗೆ ತಗ್ಗಿಸುವ ಪ್ರಸ್ತಾವಕ್ಕೆ ಮಂಡಳಿಯು ಒಪ್ಪಿಗೆ ನೀಡಿತ್ತು.
ಜಿಎಸ್‍ಟಿ ಮಂಡಳಿಯು 350ಕ್ಕೂ ಹೆಚ್ಚು ಉತ್ಪನ್ನಗಳ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದ್ದು. ಪ್ರಸ್ತುತ ಶೇ 5 ಹಾಗೂ ಶೇ 18ರ ಪ್ರಮಾಣದ ಎರಡು ಹಂತದ ಜಿಎಸ್‍ಟಿ ವ್ಯವಸ್ಥೆ ಜಾರಿಗೊಳಿಸಲಿದೆ.




