ಮಲಪ್ಪುರಂ ಜಿಲ್ಲೆಯ 47 ವರ್ಷದ ಚೆಲಂಬ್ರಾದ ಶಾಜಿ ಎಂಬುವರು ಸೋಂಕಿನಿಂದಾಗಿ ಗುರುವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಮಿದುಳು ಸೋಂಕಿನಿಂದ ಬಳಲುತ್ತಿದ್ದ ಶಾಜಿ ಅವರನ್ನು ಆಗಸ್ಟ್ 9ರಂದು ಕೋಯಿಕೋಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಆಸ್ಪತ್ರೆಯಲ್ಲಿ ಸೋಂಕಿನಿಂದ ಬಳಲುತ್ತಿರುವ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋಮವಾರದಂದು (ಸೆಪ್ಟೆಂಬರ್ 8) ವಂದೂರು ಜಿಲ್ಲೆಯ 54 ವರ್ಷದ ಮಹಿಳೆ ಸೋಂಕಿನಿಂದಾಗಿ ಮೃತಪಟ್ಟಿದ್ದರು. ಶನಿವಾರ 45 ವರ್ಷ ವ್ಯಕ್ತಿ ಯೊಬ್ಬರು ಮೃತಪಟ್ಟಿದ್ದರು. ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ಮೂವರು ಮೃತಪಟ್ಟಿದ್ದಾರೆ. ಸೋಂಕಿನ ಲಕ್ಷಣಗಳಿರುವ ಅನೇಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕು ಹೆಚ್ಚುತ್ತಿರುವ ಕಾರಣ ಕೇರಳ ಆರೋಗ್ಯ ಇಲಾಖೆಯು ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಿದೆ.




