ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರ ಚಲನವಲನಗಳ ಖಚಿತ ಮಾಹಿತಿ ಆಧರಿಸಿ ಗುಡ್ಡರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ಶೋಧ ಕಾರ್ಯ ಆರಂಭಿಸಿತ್ತು.
ಈ ಕುರಿತು ಚಿನಾರ್ ಕಾರ್ಪ್ಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, 'ಉಗ್ರರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ' ಎಂದು ತಿಳಿಸಿದೆ.




