HEALTH TIPS

ಆಕ್ರಮಣದ ವಿರುದ್ಧ ಜಂಟಿ ಹೋರಾಟ: ಪಾಕಿಸ್ತಾನ-ಸೌದಿ ನಡುವೆ ರಕ್ಷಣಾ ಒಪ್ಪಂದ

 ಸ್ಲಾಮಾಬಾದ್: ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ದೇಶಗಳು ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದರನ್ವಯ ಯಾವುದೇ ದೇಶದ ಮೇಲೆ ಆಕ್ರಮಣ ನಡೆದರೆ ಎರಡೂ ದೇಶಗಳ ಮೇಲಿನ ದಾಳಿ ಎಂದು ಪರಿಗಣಿಸಲಾಗುತ್ತದೆ.

ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೌದಿ ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.


ಕತಾರ್‌ನಲ್ಲಿ ಹಮಾಸ್ ನಾಯಕರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದ ಕೆಲ ದಿನಗಳ ಬಳಿಕ ಈ ಒಪ್ಪಂದ ನಡೆದಿದೆ.

ಈ ಎರಡೂ ದೇಶಗಳ ಪೈಕಿ ಯಾವುದೇ ದೇಶದ ಮೇಲಿನ ಆಕ್ರಮಣವನ್ನು ಎರಡೂ ದೇಶಗಳ ಮೇಲಿನ ದಾಳಿ ಎಂದು ಪರಿಗಣಿಸಲಾಗುತ್ತದೆ ಎಂಬುದು ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದದ ಸಾರಾಂಶವಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಒಪ್ಪಂದವು ಎರಡೂ ರಾಷ್ಟ್ರಗಳ ಭದ್ರತೆಯನ್ನು ಹೆಚ್ಚಿಸಲು ಮತ್ತು ಈ ಪ್ರದೇಶ ಹಾಗೂ ಪ್ರಪಂಚದಲ್ಲಿ ಭದ್ರತೆ ಮತ್ತು ಶಾಂತಿಯನ್ನು ಸಾಧಿಸಲು ಉಭಯ ದೇಶಗಳ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಇದು ಎರಡೂ ದೇಶಗಳ ನಡುವಿನ ರಕ್ಷಣಾ ಸಹಕಾರದ ಅಂಶಗಳನ್ನು ಅಭಿವೃದ್ಧಿಪಡಿಸುವ ಮತ್ತು ಯಾವುದೇ ಆಕ್ರಮಣದ ವಿರುದ್ಧ ಜಂಟಿ ಹೋರಾಟವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಅದು ಹೇಳಿದೆ.

ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಭಾರತವು ತನ್ನ ರಾಷ್ಟ್ರೀಯ ಭದ್ರತೆಗೆ ಹಾಗೂ ಪ್ರಾದೇಶಿಕ ಮತ್ತು ಜಾಗತಿಕ ಸ್ಥಿರತೆಗೆ ಈ ಒಪ್ಪಂದದ ಪರಿಣಾಮಗಳನ್ನು ಅಧ್ಯಯನ ಮಾಡುತ್ತದೆ ಎಂದು ಹೇಳಿದ್ದಾರೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries