ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 46ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಧಾರ್ಮಿಕ, ವೈದಿಕ ವಿಧಿ ವಿಧಾನಗಳಿಂದ ಅತ್ಯಂತ ಶಾಸ್ತ್ರಬದ್ಧವಾಗಿ ಜರಗಿತು. ಐದು ದಿನಗಳ ಕಾಲ ನಡೆದ ಉತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
ಈ ಸಂದರ್ಭ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಗಡಿನಾಡ ಸಾಂಸ್ಕೃತಿಕ ಕಲಾ ವೇದಿಕೆ ಕಾಸರಗೋಡು ಸಂಸ್ಥೆಯ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮವು ವೈವಿಧ್ಯಮಯವಾಗಿ ಪ್ರಸ್ತುತಗೊಂಡಿತು. ಗುರುರಾಜ್ ಕಾಸರಗೋಡು ಅವರ ಆಯೋಜನೆ ಹಾಗೂ ನಿರೂಪಣೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಲಾವಿದರು ಭಾಗವಹಿಸಿ ಕಲಾಭಿಮಾನಿಗಳನ್ನು ರಂಜಿಸಿ ಮೆಚ್ಚುಗೆಗೆ ಪಾತ್ರರಾದರು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳಾದ ಶಂಕರ ಆಳ್ವ ಅವರು ಗುರುರಾಜ್ ಕಾಸರಗೋಡು ಅವರಿಗೆ ಶಾಲು ಹೊದೆಸಿ ಶ್ರೀದೇವರ ಪ್ರಸಾದ ನೀಡಿ ಗೌರವಿಸಿದರು. ವೇದಿಕೆಯಲ್ಲಿದ್ದ ದಯಾನಂದ ರಾವ್, ರತನ್ ಕುಮಾರ್, ಜಗದೀಶ್ ರೈ, ಕಿದೂರು ದೇವಸ್ಥಾನದ ಜೊತೆ ಕಾರ್ಯದರ್ಶಿ ಚಂದ್ರಕಲಾ, ಸಂಸ್ಥೆಯ ಕೋಶಾಧಿಕಾರಿ ಶೈಲಜಾ ಹೊಳ್ಳ ಕಲಾವಿದರಿಗೆ ಸಂಸ್ಥೆಯ ವತಿಯಿಂದ ನೀಡಿದ ಗೌರವ ಸ್ಮರಣಿಕೆಯನ್ನು ನೀಡಿ ಪುರಸ್ಕರಿಸಲಾಯಿತು.

.jpg)
