ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಆಯೋಜಿಸಿರುವ ಗೃಹ ಸಂಪರ್ಕ ಕಾರ್ಯಕ್ರಮದ ಜಿಲ್ಲಾ ಮಟ್ಟದ ಉದ್ಘಾಟನೆ ಮೊಗ್ರಾಲ್ ಪುತ್ತೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿತು. ಪಂಚಾಯಿತಿಯ ಹತ್ತನೇ ವಾರ್ಡು ಕೇಳುಗುಡೆಯಮನೆಯಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಟಿ. ರಮೇಶ್ ಗೃಹಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್, ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್, ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಮನುಲಾಲ್ ಮೆಲತ್, ಎನ್. ಬಾಬುರಾಜ್, ಜಿಲ್ಲಾ ಸಮಿತಿ ಉಪಾಧ್ಯಕ್ಷ ಪಿ.ರಮೇಶ್, ಮಂಡಲ ಸಮಿತಿ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಜಿಲ್ಲಾ ಕಾರ್ಯದರ್ಶಿಗಳಾದ ಎನ್.ಮಧು, ಪುಷ್ಪಾ ಗೋಪಾಲನ್, ಪ್ರಮೀಳಾ ಮಜಲ್, ಜಿಲ್ಲಾ ಕೋಶ ಸಂಯೋಜಕ ಸುಕುಮಾರ್‍ಕುದ್ರೆಪ್ಪಾಡಿ, ಕಾಸರಗೋಡು ಮಂಡಲ ಸಮಿತಿ ಕಾರ್ಯದರ್ಶಿಗಳಾದ ಪ್ರಿಯಾ ನಾಯ್ಕ್, ರಮೇಶ್ ಮೀಪುಗುರಿ, ಮೊಗ್ರಾಲ್ ಪುತ್ತೂರು ಪಂಚಾಯತ್ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಪೆರ್ನಡ್ಕ, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ. ಸುಹೇಲ್, ಒಬಿಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಮುರಳಿ ಕುಮಾರ್ ಮತ್ತು ವಾರ್ಡ್ ಉಸ್ತುವಾರಿ ರಾಜೇಶ್ ನಾಯಕ್ ಉಪಸ್ಥಿತರಿದ್ದರು.





