ಕಾಸರಗೋಡು: ಜಿಲ್ಲಾ ವಾರ್ತಾ ಮತ್ತು ಮಾಹಿತಿ ಇಲಾಖೆ ಕಚೇರಿಯ ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ದೈನಂದಿನ ರಸಪ್ರಶ್ನೆ ಸ್ಪರ್ಧೆಯಲ್ಲಿ ಆಗಸ್ಟ್ ತಿಂಗಳಲ್ಲಿ ಆಶಾ ದಿಲೀಪ್ ಅವರು ಆಯ್ಕೆಯಾಗಿದ್ದಾರೆ.
ಜಿಲ್ಲಾಧಿಕಾರಿ ಚೇಂಬರ್‍ನಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಬಹುಮಾನ ವಿತರಿಸಿದರು. ಜಿಲ್ಲಾ ಮಾಹಿತಿ ಅಧಿಕಾರಿ ಎಂ.ಮಧುಸೂದನನ್, ಸಹಾಯಕ ಸಂಪಾದಕಿ ಎ.ಪಿ.ದಿಲ್ನಾ ಮತ್ತು ಸಿಬ್ಬಂದಿ ಸದಸ್ಯ ಟಿ.ಕೆ.ಕೃಷ್ಣನ್ ಉಪಸ್ಥಿತರಿದ್ದರು.





