ಮಹಾರಾಜ್‌ಗಂಜ್ (ಯುಪಿ): ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ನಡುವೆ ಕಠ್ಮಂಡುವಿನ ಪಶುಪತಿನಾಥ ದೇವಾಲಯದಿಂದ ಹಿಂದಿರುಗುತ್ತಿದ್ದ ಭಾರತದ ಪ್ರವಾಸಿ ಬಸ್ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದರಿಂದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಬಸ್ ಚಾಲಕ ಆರೋಪಿಸಿದ್ದಾರೆ.
ಭಾರತ-ನೇಪಾಳ ಗಡಿಯಲ್ಲಿ ಸೋನೌಲಿ ಬಳಿ ಸೆ.9ರಂದು 49 ಭಾರತೀಯರಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳು ಒಡೆದಿವೆ. ಬಸ್‌ನಲ್ಲಿದ್ದ ಮಹಿಳೆಯರು, ವೃದ್ಧರು ಸೇರಿದಂತೆ ಪ್ರಯಾಣಿಕರು ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ, ಸ್ಥಳೀಯ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದವರನ್ನು ನೇಪಾಳ ಸರ್ಕಾರವು ಭಾರತೀಯ ರಾಯಭಾರ ಕಚೇರಿ ವ್ಯವಸ್ಥೆ ಮಾಡಿದ ವಿಶೇಷ ವಿಮಾನದಲ್ಲಿ ಭಾರತಕ್ಕೆ ಕಳುಹಿಸಿಕೊಟ್ಟಿದೆ.




