HEALTH TIPS

ಎಲ್ಲಿಗೂ ಹೋಗುವುದಿಲ್ಲ,ಎನ್‌ಡಿಎ ಮೈತ್ರಿಕೂಟದಲ್ಲಿಯೇ ಇರುತ್ತೇನೆ: ಮೋದಿಗೆ ನಿತೀಶ್‌

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಎನ್‌ಡಿಎ ಮೈತ್ರಿಕೂಟದಲ್ಲಿ ಉಳಿಯುವುದಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ಭರವಸೆ ನೀಡಿದ್ದಾರೆ.

ಈ ಹಿಂದೆ ಆರ್‌ಜೆಡಿ -ಕಾಂಗ್ರೆಸ್ ಮೈತ್ರಿಕೂಟದೊಂದಿಗೆ ಅಧಿಕಾರ ಹಂಚಿಕೊಂಡ ಸಂದರ್ಭವನ್ನೂ ಮೆಲುಕು ಹಾಕಿದ ನಿತೀಶ್‌ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಅಂದಾಜಿಸಲಾಗಿದೆ. ಈ ನಡುವೆ ಎಲ್ಲಾ ಪಕ್ಷಗಳು ರಾಜಕೀಯ ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ರ‍್ಯಾಲಿಗಳನ್ನು ಆಯೋಜಿಸಲಾಗುತ್ತಿದೆ.

ಭಾರತಕ್ಕೆ ಅಮೆರಿಕದ ಮುಖ್ಯ ವ್ಯಾಪಾರ ಸಮಾಲೋಚಕ: ನಾಳೆ ಮಾತುಕತೆಗೆಳತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕಿಡಿಗೇಡಿ ಭಾರತ-ನೇಪಾಳ ಗಡಿಯಲ್ಲಿ ಬಂಧನ!

ಪೂರ್ಣಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ನಿತೀಶ್‌, 2005ರಲ್ಲಿ ಜೆಡಿಯು ಹಾಗೂ ಬಿಜೆಪಿ ಮೈತ್ರಿಕೂಟ ಸರ್ಕಾರ ರಚಿಸಿತ್ತು. ಆ ಬಳಿಕ ನಮ್ಮದೇ ಪಕ್ಷದ ಕೆಲವು ನಾಯಕರ ಮಾತು ಕೇಳಿ ಮತ್ತೊಂದು ಮೈತ್ರಿಕೂಟದ ಭಾಗವಾಗಬೇಕಾಯಿತು ಎಂದು ಹೇಳಿದ್ದಾರೆ.

'ಅವರೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದ್ದ ವೇಳೆ ಎಂದಿಗೂ ನೆಮ್ಮದಿಯಾಗಿರಲಿಲ್ಲ. ಆ ಜನರು ಯಾವಾಗಲೂ ಕಿಡಿಗೇಡಿತನದಲ್ಲಿ ತೊಡಗಿದ್ದರು' ಎಂದು ನಿತೀಶ್‌ ಆರ್‌ಜೆಡಿ ಹಾಗೂ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ನಾನು ಈಗ ಎನ್‌ಡಿಎ ಮೈತ್ರಿಕೂಟಕ್ಕೆ ಹಿಂತಿರುಗಿದ್ದೇನೆ. ಇನ್ನು ಮುಂದೆ ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ನಿತೀಶ್‌ ಪ್ರಧಾನಿ ಮೋದಿ ಎದುರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries