ಕುಂಬಳೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ತಾತ್ಕಾಲಿಕ ಟೋಲ್ ನಿರ್ಮಾಣದಲ್ಲಿ ಬಿಜೆಪಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂಬ ಎಸ್.ಡಿ.ಪಿ.ಐ. ನೀಡುತ್ತಿರುವ ಹೇಳಿಕೆ ಸುಳ್ಳು ಎಂದು ಬಿಜೆಪಿ ಕುಂಬಳೆ ಮಂಡಲ ಸಮಿತಿ ಆರೋಪಿಸಿದೆ.
ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಆರಂಭವಾಗಿ, ಸಮಸ್ಯಾತ್ಮಕವಾದಾಗ ಕೆಲವು ಕಡೆಗಳಲ್ಲಿ ಬಿಜೆಪಿ ಮಧ್ಯಪ್ರವೇಶಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ ಸಂಸದರು ಮತ್ತು ಶಾಸಕರಿಗಿಂತ ಬಿಜೆಪಿ ಜಿಲ್ಲಾಧ್ಯಕ್ಷರು ಹೆಚ್ಚು ಮಧ್ಯಪ್ರವೇಶಿಸಿದ್ದಾರೆ ಎಂಬುದಕ್ಕೆ ಪುರಾವೆಗಳಿವೆ ಮತ್ತು ಟೋಲ್ ಸಮಸ್ಯೆಯ ಕುರಿತು ಕೇಂದ್ರ ಸಾರಿಗೆ ಸಚಿವರಿಗೆ ವರದಿ ಸಲ್ಲಿಸುವುದು ಸೇರಿದಂತೆ ಚಟುವಟಿಕೆಗಳೊಂದಿಗೆ ಬಿಜೆಪಿ ಕುಂಬಳೆ ಮಂಡಲ ಸಮಿತಿ ಮುಂದುವರಿಯುತ್ತಿದೆ. ಶೀಘ್ರದಲ್ಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಲು ಸಿದ್ಧತೆ ನಡೆಸುತ್ತಿದೆ. ಎಸ್‍ಡಿಪಿಐ ಸುಳ್ಳು ಹೇಳಿಕೆಗಳ ಮೂಲಕ ಜನಸಾಮಾನ್ಯರನ್ನು ಬಿಜೆಪಿಗೆ ವಿರುದ್ಧವಾಗಿಸುವ ವಿಫಲ ಪ್ರಯತ್ನ ಮಾಡುತ್ತಿದೆ. ಆದರೆ ಈ ಪ್ರದೇಶದ ಜನರು ಅದನ್ನು ಅರ್ಥಮಾಡಿದೆ ಎಂದು ಬಿಜೆಪಿ ಕುಂಬಳೆ ಮಂಡಲ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.




