ನವದೆಹಲಿ: ವಸಾಹತುಶಾಹಿ ವ್ಯವಸ್ಥೆಯನ್ನು ವಿರೋಧಿಸುವ ಬಿಜೆಪಿ ನಾಯಕರ ಮಕ್ಕಳು ಎಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ನಿವೃತ್ತ ಐಎಎಸ್ ಅಧಿಕಾರಿ, ರಾಜ್ಯ ಸಭೆಯ ಮಾಜಿ ಸದಸ್ಯ ಜವಾಹರ್ ಸರ್ಕಾರ್, ಬಿಜೆಪಿ ನಾಯಕರ ಮಕ್ಕಳು ವಿದೇಶದಲ್ಲಿ, ಯಾವೆಲ್ಲ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂಬ ವಿಸ್ತೃತ ಪಟ್ಟಿಯನ್ನು ಹಂಚಿಕೊಳ್ಳುವ ಮೂಲಕ ಈ ಚರ್ಚೆ ಮತ್ತಷ್ಟು ಕಾವೇರುವಂತೆ ಮಾಡಿದ್ದಾರೆ.