ಕಾಸರಗೋಡು: ಯುವಕನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ಮಹಿಳೆ ಸೇರಿದಂತೆ ಇಬ್ಬರನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರುಬಿನಾ ಹಾಗೂ ಅಬೂಬಕ್ಕರ್ ಸಿದ್ದೀಕ್ ಬಂಧಿತರು.
ಚೆರ್ಕಳ ನಿವಾಸಿ ಮಹಮ್ಮದ್ ನವಸ್ ಎಂಬವರನ್ನು ಜು. 24ರಂದು ರಾತ್ರಿ ಕಾರಿನಲ್ಲಿ ಆಗಮಿಸಿದ ತಂಡವೊಂದುಚೆರ್ಕಳ ಪೇಟೆಯ ಸೂಪರ್‍ಮಾರ್ಕೆಟ್ ಬಳಿ ಇರಿದು ಕೊಲೆಗೆ ಯತ್ನಿಸಿರುವ ಬಗ್ಗೆ ಇರ್ಷಾದ್, ಶಬೀರ್, ಹಾಶಿಂ ಸೇರಿದಂತೆ ನಾಲ್ವರ ವಿರುದ್ಧ ವಿದ್ಯಾನಗರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಇವರಲ್ಲಿ ಒಂದನೇ ಆರೋಪಿಗೆ ತಮ್ಮ ಮನೆಯಲ್ಲಿ ವಾಸ್ತವ್ಯ ಕಲ್ಪಿಸಿ, ಸಂರಕ್ಷಣೆ ಒದಗಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ.




