ಕಾಸರಗೋಡು: ಮೊಗ್ರಾಲ್ ಪುತ್ತೂರು ಪಂಚಾಯತ್ ವ್ಯಾಪ್ತಿಯ ಕಡವತ್ ಮೊಗರು-ಕೊಟ್ಟಕುನ್ನು ಕರಾವಳಿ ರಸ್ತೆಯ ಎರಡನೇ ರೀಚ್ ಅನ್ನು ಶಾಸಕ ಎನ್.ಎ.ನೆಲ್ಲಿಕುನ್ನು ಉದ್ಘಾಟಿಸಿದರು. ಮೊಗ್ರಾಲ್ ಪುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಡ್ವ. ಸಮೀರ ಫೈಸಲ್ ಅಧ್ಯಕ್ಷತೆ ವಹಿಸಿದ್ದರು. 55 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದೆ.


