ಕಾಸರಗೋಡು: ಚಂದ್ರಗ್ರಹಣದ ಹಿನ್ನೆಲಯಲ್ಲಿ ಕುಂಬಳೆ ಸೀಮೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಪೂಜಾ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಂದು ಮಧ್ಯಾಹ್ನದ ಪೂಜೆ ಮಧ್ಯಾಹ್ನ 12ಕ್ಕೆ ನಡೆಯಲಿದ್ದು, ಒಂದು ಗಂಟೆ ವರರೆಗೆ ಮಾತ್ರ ಭೋಜನ ಪ್ರಸಾದ ವಿತರಣೆಯಾಗಲಿದೆ. ಸಂಜೆ 6ಕ್ಕೆ ರಾತ್ರಿ ಪೂಜೆ ನಡೆಯಲಿದ್ದು, ಆ ದಿನ ಸಂಜೆ ಯಾವುದೇ ವಿಶೇಷ ಸೇವೆಗಳನ್ನು ನಡೆಸಲಾಗುವುದಿಲ್ಲ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.




