ಮಂಜೇಶ್ವರ: ಮಂಜೇಶ್ವರ ಸೇರಿದಂತೆ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳಲ್ಲಿ ನಾಲ್ಕು ಪ್ರತ್ಯೇಕ 'ಪೋಕ್ಸೋ'ಪ್ರಕರಣ ದಾಖಲಾಗಿದ್ದು, ಇದರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಚಿತ್ತಾರಿಕಲ್ ಪೊಲೀಸ್ ಠಾಣೆ ವ್ಯಾಫ್ತಿಯಲ್ಲಿ ಬಾಲಕಗೆ ಸಲಿಂಗ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡು ಪ್ರತ್ಯೇಕ ಕೇಸು ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಣ್ಣನ್ ಎಂಬಾತನನ್ನು ಬಂಧಿಸಲಾಗಿದೆ. 2021ರಿಂದ 12ರ ಹರೆಯದ ಬಾಲಕಗೆ ಹಾಗೂ 2024ರಲ್ಲಿ ಇನ್ನೊಬ್ಬ ಬಾಲಕಗೆ ಸಲಿಂಗ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈ ಬಂಧನ ನಡೆದಿದೆ.
ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಉಪ್ಪಳದಲ್ಲಿ ಬಾಲಕಿ ಎದುರು ನಗ್ನತೆ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಬೂಬಕ್ಕರ್ ಎಂಬಾತನನ್ನು ಪೋಕ್ಸೋ ಅನ್ವಯ ಪೊಲೀಸರುಬಂಧಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ 14ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ, 17ರ ಹರೆಯದ ಬಾಲಕನ ವಿರುದ್ಧ ಬೇಡಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಬಾಳಕಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ.




