ಸಮರಸ ಚಿತ್ರಸುದ್ದಿ: ಕಾಸರಗೋಡು: ಒಡಿಯೂರು ಕ್ಷೇತ್ರದಲ್ಲಿ ಶ್ರೀ ಲಲಿತಾ ಪಂಚಮಿ ಹಾಗೂ ಶ್ರೀ ಚಂಡಿಕಾ ಯಾಗದ ಶುಭ ಸಂದರ್ಭ ನಡೆದ ಸಮಾರಂಭದಲ್ಲಿ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಶ್ರೀ ಧರ್ಮಸ್ಥಳ ಮೇಳದ ಯಕ್ಷಗಾನ ಭಾಗವತ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರಿಗೆ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರು ""ಕಲಾ ಸಿರಿ""ಪ್ರಶಸ್ತಿ ನೀಡಿ ಗೌರವಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಐದುಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಒಡಿಯೂರು ಶ್ರೀಮಾತಾನಂದಮಯೀ ದಿವ್ಯ ಉಪಸ್ಥಿತರಿದ್ದು, ಆಶೀರ್ವದಿಸಿದರು.





