ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆಗೆ ಸಜ್ಜಾಗಲು ಕಾಂಗ್ರೆಸ್ ಪಕ್ಷವು 'ಬಿಹಾರ ಪ್ರದೇಶ ಕಾಂಗ್ರೆಸ್ ಚುನಾವಣಾ ಸಮಿತಿ'ಯನ್ನು ಮಂಗಳವಾರ ರಚಿಸಿದೆ. ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥ ರಾಜೇಶ್ ರಾಮ್, ಶಕೀಲ್ ಅಹ್ಮದ್ ಖಾನ್ ಹಾಗೂ ಮದನ್ ಮೋಹನ್ ಜಾ ಅವರು ಸಮಿತಿಯಲ್ಲಿದ್ದಾರೆ.
ಚುನಾವಣಾ ಸಮಿತಿಯ ಪ್ರಸ್ತಾವನೆಯನ್ನು ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ. ಸಮಿತಿಯಲ್ಲಿ 39 ಸದಸ್ಯರಿದ್ದಾರೆ.
ಈ ವರ್ಷದ ನವೆಂಬರ್‌ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.




