ಸಮರಸ ಚಿತ್ರಸುದ್ದಿ: ಮಂಜೇಶ್ವರ : 2925-26ನೇ ಶೈಕ್ಷಣಿಕ ಸಾಲಿನಲ್ಲಿ ಕೊಡ್ಲಮೊಗರು ಶ್ರೀವಾಣೀವಿಜಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ಕು. ಶಮ್ನಾ ಪಾತಿಮಾಳು ಹಿರಿಯ ಪ್ರಾಥಮಿಕ ವಿಭಾಗದ ಉರ್ದು ಭಾಷೆಗೆ ಸಂಬಂಧಿಸಿದ ಸರ್ವರ್ ಮೆಗಾ ಕ್ವಿಜ್ ನಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಶಾಲಾ ರಕ್ಷಕ ಶಿಕ್ಷಕ ಸಂಘ ಹಾಗೂ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಮಾತೃಸಂಘದ ಪದಾಧಿಕಾರಿಗಳು, ಶಾಲಾ ಪ್ರಬಂಧಕರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ಹಾಗೂ ಅಧ್ಯಾಪಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.




.jpg)
