ಕಾಸರಗೋಡು: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಯಂತಿ ಕಾರ್ಯಕ್ರಮ, ಸೇವಾ ಪಾಕ್ಷಿಕದ ಉದ್ಘಾಟನಾ ಸಮಾರಂಭ ಬಿಜೆಪಿ ಬಿಜೆಪಿ ಕಾಸರಗೋಡು ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಜರುಗಿತು. ಬಿಜೆಪಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಟಿ ರಮೇಶ್ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್ ಅಧ್ಯಕ್ಷತೆ ವಹಿಸಿದ್ದರು. ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು.
ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಸವಿತಾ ಟೀಚರ್, ಸತೀಶ್ಚಂದ್ರ ಭಂಡಾರಿ, ವಲಯ ಪ್ರಧಾನ ಕಾರ್ಯದರ್ಶಿ ವಿ.ರವೀಂದ್ರನ್, , ಪಿ.ಆರ್ ಸುನಿಲ್, ಸುಧಾಮ ಗೋಸಾಡಎನ್. ಬಾಬುರಾಜ್ ಮೊದಲಾದವರು ಉಪಸ್ಥಿತರಿದ್ದರು.




