ಲೇಹ್ (PTI): ಲಡಾಖ್‌ನಲ್ಲಿರುವ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಸಂಭವಿಸಿದ ಹಿಮಪಾತದಿಂದಾಗಿ ಇಬ್ಬರು ಅಗ್ನಿವೀರರು ಸೇರಿ ಮೂವರು ಸೈನಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
12,000 ಅಡಿ ಎತ್ತರದ ಸಿಯಾಚಿನ್‌ನ ಸೇನಾ ಶಿಬಿರ ಇರುವ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ಹಿಮಪಾತಕ್ಕೆ ಅವರು ಸಿಲುಕಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಯೋಧರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದಿದ್ದಾರೆ.




