ಪೆರ್ಲ: ಇಲ್ಲಿಯ ನಾಲಂದ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕದಿಂದ ಶಿಕ್ಷಕ ದಿನಾಚರಣೆ ಆಚರಿಸಲಾಯಿತು. ಇದರ ಅಂಗವಾಗಿ ಸರಿಸುಮಾರು 25 ವರ್ಷಗಳ ಕಾಲ ಪೆರ್ಲ ಎ ಎಲ್ ಪಿ ಶಾಲೆಯಲ್ಲಿ ಸೇವೆಯನ್ನು ಸಲ್ಲಿಸಿ, ಉತ್ತಮ ಶಿಕ್ಷಕ ಎಂಬ ನೆಗಳ್ತೆಗೆ ಪಾತ್ರರಾದ ರಾಮ ನಾಯಕ್ ಪೆರ್ಲ ಇವರನ್ನು ಅವರ ಸ್ವಗೃಹದಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಶಂಕರ ಖಂಡಿಗೆ, ಎನ್ ಎಸ್ ಎಸ್ ಯೋಜನಾಧಿಕಾರಿ ವರ್ಷಿತ್ ಕೆ, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.




.jpg)
