ಪೆರ್ಲ: ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ, ಗ್ರಾಮ ವಿಕಾಸ ಕ್ಲಬ್ ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ "ರಕ್ತದಾನ ಅಮೃತ ಮಹೋತ್ಸವ"ದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಪ್ರಾಂಶುಪಾಲ ಶಂಕರ ಖಂಡಿಗೆ ರಕ್ತದಾನ ಮಾಡುವ ಮೂಲಕ ಶಿಬಿರ ಉದ್ಘಾಟಿಸಿದರು. ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಸಮುದಾಯದವರಲ್ಲಿ ಸಾಮಾಜಿಕ ಜವಾಬ್ದಾರಿಯ ಮನೋಭಾವವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ವಯಂಪ್ರೇರಿತ ರಕ್ತದಾನದ ಮಹತ್ವ, ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಹಾಗೂ ರೋಗಿಗಳ ಜೀವ ಉಳಿಸುವಲ್ಲಿ ರಕ್ತದಾನದ ಪಾತ್ರದ ಬಗ್ಗೆ ತಿಳಿಸಲಾಯಿತು.
ವೈದ್ಯಕೀಯ ತಜ್ಞರು ಮೇಲ್ವಿಚಾರಣೆ ನಡೆಸಿ ದಾನಿಗಳ ಸುರಕ್ಷತೆ ಹಾಗೂ ಸೂಕ್ತ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ತದಾನ ಮಾಡಿದರು.



