HEALTH TIPS

ಆರ್.‌ಎಸ್‌.ಎಸ್.‌ ವಿಜಯದಶಮಿ ಕಾರ್ಯಕ್ರಮಕ್ಕೆ ಸಿಜೆಐ ಗವಾಯಿ ತಾಯಿಗೆ ಆಹ್ವಾನ

ನವದೆಹಲಿ:‌ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಅಕ್ಟೋಬರ್ 5ರಂದು ನಡೆಯಲಿರುವ ವಿಯದಶಮಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ತಾಯಿ ಕಮಲಾತೈ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿದೆ.

ಜಿಲ್ಲೆಯ ಕಿರಣ್‌ ನಗರದ ಶ್ರೀಮತಿ ನರಸಮ್ಮ ಮಹಾವಿದ್ಯಾಲಯ ಮೈದಾನದಲ್ಲಿ ಆರ್‌ಎಸ್‌ಎಸ್‌ ಅಮರಾವತಿ ಮಹಾನಗರ ಘಟಕವು ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಆಹ್ವಾನ ನೀಡಿರುವ ಬಗ್ಗೆ ಗವಾಯಿ ಅವರ ಕುಟುಂಬದ ಆಪ್ತ ಮೂಲಗಳು ದೃಢಪಡಿಸಿವೆ. ಹಿರಿಯ ಆರ್‌ಎಸ್‌ಎಸ್ ನಾಯಕ ಜೆ. ನಂದ ಕುಮಾರ್ ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಲಿದ್ದಾರೆ.

1925ರಲ್ಲಿ ವಿಜಯದಶಮಿಯಂದು ಸ್ಥಾಪನೆಯಾದ ಆರ್‌ಎಸ್‌ಎಸ್, ತನ್ನ ಶತಮಾನೋತ್ಸವ ವರ್ಷವನ್ನು ಗುರುತಿಸಲು ದೇಶದಾದ್ಯಂತ ಒಂದು ಲಕ್ಷ ಹಿಂದೂ ಸಮ್ಮೇಳನಗಳು ಹಾಗೂ ಸಾವಿರಾರು ಚರ್ಚೆ, ಸಭೆಗಳು ಸೇರಿದಂತೆ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಅಕ್ಟೋಬರ್‌ 2ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries