ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ )ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದನ್ವಯ ಮಂಜೇಶ್ವರ ತಾಲೂಕಿನ ಕುಂಬಳೆ ವಲಯದ ಮಡ್ವ ಕಾರ್ಯಕ್ಷೇತ್ರದಲ್ಲಿ ಜ್ಞಾನ ವಿಕಾಸ ಕೇಂದ್ರದ ಮಹಿಳೆಯರಿಗೆ ಮೂರು ತಿಂಗಳ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕುಪ್ಪೆ ಪಂಜುರ್ಲಿ ದೈವಸ್ಥಾನ ಸಮಿತಿ ಅಧ್ಯಕ್ಷ ಚಂದ್ರ ಕಾಜೂರು ಅಧ್ಯಕ್ಷತೆ ವಹಿಸಿದ್ದರು.
ಜನಜಾಗೃತಿ ವೇದಿಕೆ ಕುಂಬಳೆ ವಲಯ ಅಧ್ಯಕ್ಷ ಮಹೇಶ್ ಪುಣಿಯೂರು, ನಾರಾಯಣ ಟೈಲರ್, ಸತೀಶ್, ವಲಯದ ಮೇಲ್ವಿಚಾರಕ ಅಭಿಷೇಕ್ ಡಿ, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿಗಳಾದ ಸುನೀತಾ, ಸೇವಾಪ್ರತಿನಿಧಿ ಸರಿತಾ, ಒಕ್ಕೂಟದ ಪದಾಧಿಕಾರಿಗಳು, ತರಬೇತಿ ಯ ಫಲಾನುಭವಿಗಳು ಉಪಸ್ಥಿತರಿದ್ದರು.





