ಕಾಸರಗೋಡು: ಕನ್ನಡದ ಹಿರಿಯ ಕಾದಂಬರಿಕಾರ, ಚಿಂತಕ, ಸರಸ್ವತಿ ಸಮ್ಮಾನ್ ಪುರಸ್ಕøತ ಸಾಹಿತಿ ಎಸ್ .ಎಲ್. ಭೈರಪ್ಪ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ತೀವ್ರ ಸಂತಾಪ ಸೂಚಿಸಿದೆ.
ಕನ್ನಡ ಸಾಹಿತ್ಯ ಲೋಕಕ್ಕೆ ಉತ್ಕೃಷ್ಟ ಕಾದಂಬರಿಗಳನ್ನು ನೀಡಿ ಲಕ್ಷಾಂತರ ಓದುಗರ ಮನ ಗೆದ್ದಿದ್ದ ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ತನ್ನ ಸಂತಾಪ ಸೂಚಕ ಠರಾವಿನಲ್ಲಿ ತಿಳಿಸಿದೆ.




