ಕಾಸರಗೋಡು: ಜಿಲ್ಲಾ ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ಣಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಓಣಂ ಹಬ್ಬವನ್ನು ಕಾಸರಗೋಡು ಸೇವಾಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು.
ಶಾಸಕ ಎನ್.ಎ ನೆಲ್ಲಿಕುನ್ನು ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭ ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಅನಿವಾಸಿ ಭಾರತೀಯ, ಶಿವಾನಂದ ಕೋಟ್ಯಾನ್ ಕುವೈತ್ ರಚಿಸಿರುವ 'ಗುರುದರ್ಶನ'ಕೃತಿಯ ಬಗ್ಗೆ ಹಿರಿಯ ಸಾಹಿತಿ, ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕ ಪರಿಚಯ ನೀಡಿದರು. ರಾಜ್ಯ ಜೈವಿಕ ಮಂಡಳಿ ನಿರ್ದೇಶಕ ಕಾರ್ಯದರ್ಶಿ, ಹೆಚ್ಚುವರಿ ಎಸ್.ಪಿ ಡಾ. ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕನ್ನಡ ಮಾಧ್ಯಮ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿಗಂಗಾಧರ ತೆಕ್ಕೆಮೂಲೆ, ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ಸದಸ್ಯ ಅಖಿಲೇಶ್ ನಗುಮುಗಂ, ಉಪಸ್ಥಿತರಿದ್ದರು. ಹೂವಿನ ರಂಗೋಲಿ, ಓಣಂ ಔತಣಕೂಟವನ್ನು ಆಯೋಜಿಸಲಾಗಿತ್ತು.





