ಬದಿಯಡ್ಕ: ಗೋಳಿಯಡ್ಕ ಶ್ರೀ ವಿಷ್ಣು ಫ್ರೆಂಡ್ಸ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್‍ನ ನೇತೃತ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಭಾನುವಾರ ಆಚರಿಸಲಾಯಿತು. ನೀರ್ಚಾಲು ನಿವೇದಿತಾ ಸೇವಾ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಗಣೇಶ್ ಕೃಷ್ಣ ಅಳಕ್ಕೆ ದೀಪಬೆಳಗಿಸಿ ಉದ್ಘಾಟಿಸಿ ಮಾತನಾಡಿ, ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಮಕ್ಕಳನ್ನು ತೊಡಗಿಸಿಕೊಳ್ಳುತ್ತಾ ಅವರನ್ನು ನಾಡಿನ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಇಂತಹ ಕಾರ್ಯಕ್ರಮಗಳು ಕಾರಣವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಹಬ್ಬಗಳ ಆಚರಣೆಯಿಂದ ಸಾರ್ವಜನಿಕರು ಒಂದುಗೂಡಲು ಸಹಕಾರಿಯಾಗುತ್ತದೆ. ಯುವಕರು ಮಕ್ಕಳು ಸಂಘಟಿತರಾದಾಗ ನಾಡು ಅಭಿವೃದ್ಧಿ ಪಥದತ್ತ ಮುಂದುವರಿಯುತ್ತದೆ. ಈ ನಿಟ್ಟಿನಲ್ಲಿ ಸಂಘಟಕರ ಕಾರ್ಯ ಶ್ಲಾಘನೀಯ ಎಂದರು.
ಪ್ರಮುಖರಾದ ಗುರುವ ಗೋಳಿಯಡ್ಕ, ಸೋಮನಾಥ ಮಾಸ್ತರ್, ಕ್ಲಬ್‍ನ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.




.jpg)
