ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಶಾಲಾ ಕಲೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಬಿ.ಎಂ ಸಮಾರಂಭ ಉದ್ಘಾಟಿಸಿದರು. ಶಾಲಾ ಮುಖ್ಯ ಶಿಕ್ಷಕ ಎನ್. ಕೇಶವ ಪ್ರಕಾಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯ ಅನಾವರಣಕ್ಕೆ ಶಾಲಾ ಕಲೋತ್ಸವಗಳು ಸಹಕಾರಿಯಾಗಿದೆ. ಕಲೋತ್ಸವ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿನ ಸ್ಪರ್ಧಾ ಮನೋಭಾವವನ್ನು ಮತ್ತಷ್ಟು ವಿಕಸಿತಗೊಳಿಸಬೇಕು ಎಂದು ತಿಳಿಸಿದರು. ಪೆರ್ಲ ಶ್ರೀ ಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಅತಿಥಿಯಾಘಿ ಭಾಗವಹಿಸಿದ್ದರು. ಕೃಷ್ಣಪ್ರಸಾದ್ ಬನಾರಿ ಸ್ವಾಗತಿಸಿದರು. ಉದಯಶಂಕರ ಮಾಸ್ಟರ್ ವಂದಿಸಿದರು. ನಂತರ ವಿದ್ಯಾರ್ಥಿಗಳು ವಿವಿಧ ಕಲಾ, ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.





