ಉಪ್ಪಳ: ಸಹಕಾರ ಭಾರತಿ ಮಂಜೇಶ್ವರ ತಾಲೂಕು ಸಮಿತಿಯ ವಾರ್ಷಿಕ ಸಮ್ಮೇಳನ ಇತ್ತೀಚೆಗೆ ಬಾಯಾರು ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. ಕೇರಳ ಸರ್ಕಾರದ ಕೃಷಿ ಇಲಾಖೆಯ ನಿವೃತ್ತ ಉಪನಿರ್ದೇಶಕ ತಿರುಮಲೇಶ್ವರ ಭಟ್ ಸಮಾರಂಭ ಉದ್ಘಾಟಿಸಿದರು. ಸಹಕಾರ ಭಾರತಿಯ ರಾಜ್ಯ ಸಮಿತಿ ಅಧ್ಯಕ್ಷ ವಕೀಲ ಕರುಣಾಕರನ್ ನಂಬ್ಯಾರ್ ಹಾಗೂ ಪ್ರಾಂತ್ಯ ಸಮಿತಿ ಸದಸ್ಯ ಐತ್ತಪ್ಪ ಮವ್ವಾರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಹಕಾರ ಭಾರತಿ ತಾಲೂಕು ಸಮಿತಿ ಅಧ್ಯಕ್ಷ ಶಂಕರ ನಾರಾಯಣ ಭಟ್ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಬಾಯಾರು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಕೂವೆತ್ತೋಡಿ, ಜಿಲ್ಲಾ ಸಂಘಟನಾ ಪ್ರಮುಖ್ ಅಶೋಕ್ ಬಾಡೂರು ಮೊದಲಾದವರು ಉಪಸ್ಥಿತರಿದ್ದರು. ತಾಲೂಕು ಸಮಿತಿ ಕಾರ್ಯದರ್ಶಿ ಕೃಷ್ಣ ಮೂರ್ತಿ ನೂಜಿ ಸ್ವಾಗತಿಸಿದರು. ಬಾಯಾರು ಸೇವಾ ಸಹಕಾರಿ ಬ್ಯಾಂಕಿನ ಕಾರ್ಯದರ್ಶಿ ವಿಶ್ವೇಶ್ವರ ಭಟ್ ವಂದಿಸಿದರು.





